
ನವದೆಹಲಿ: ವಿವಿಧ ಸೇವೆಗಳಿಗೆ ಆಧಾರ್ ಕಾರ್ಡ್ ನ್ನು ಲಿಂಕ್ ಮಾಡುವುದಕ್ಕೆ ವಿಧಿಸಲಾಗಿರುವ ಗಡುವನ್ನು 2018ರ ಮಾರ್ಚ್.31 ರ ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ನ್ನು ಲಿಂಕ್ ಮಾಡಬೇಕಿದೆ. ಯೋಜನೆಗಳು, ಸೇವೆಗಳ ಫಲಾನುಭವಿಗಳು ಆಧಾರ್ ಕಾರ್ಡ್ ನ್ನು ಲಿಂಕ್ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು, ಕೇಂದ್ರ ಸರ್ಕಾರದ ಪರ ವಾದ ಮಂಡಿಸುತ್ತಿರುವ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಆಧಾರ್ ಕಾರ್ಡ್ ನ್ನು ಲಿಂಕ್ ಮಾಡುವುದಕ್ಕೆ ವಿಧಿಸಲಾಗಿರುವ ಗಡುವನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
Comments are closed.