ರಾಷ್ಟ್ರೀಯ

ಚುನಾವಣೆಯಲ್ಲಿ ಗೆಲುವು ಬಿಜೆಪಿ ಸರ್ಕಾರದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ಫಲ: ಮೋದಿ

Pinterest LinkedIn Tumblr

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಈ ಗೆಲುವು ನಮ್ಮ ಸರ್ಕಾರದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ಫಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉಭಯ ರಾಜ್ಯಗಳ ಫಲಿತಾಂಶಗಳು ಉತ್ತಮ ಸರ್ಕಾರ ಮತ್ತು ಅಭಿವೃದ್ಧಿಗಾಗಿ ಸಿಕ್ಕಿದ ಬೆಂಬಲವಾಗಿದೆ. ಈ ರಾಜ್ಯಗಳಲ್ಲಿ ಗೆಲುವಿಗಾಗಿ ಕೆಲಸ ಮಾಡಿದ ಬಿಜೆಪಿ ಕಾರ್ಯಕರ್ತರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಜನರು ಬಿಜೆಪಿ ಮೇಲೆ ಇಟ್ಟಿರುವ ಪ್ರೀತಿ ಮತ್ತು ನಂಬಿಕೆಗೆ ನಾನು ಋಣಿ. ಇನ್ನು ಮುಂದೆಯೂ ನಾವು ಈ ರಾಜ್ಯದಲ್ಲಿ ಪ್ರಗತಿ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದಿದ್ದಾರೆ ಮೋದಿ

Comments are closed.