ರಾಷ್ಟ್ರೀಯ

ವಿಧವೆ ಮೇಲೆ ಪ್ರಿಯಕರನಿಂದಲೇ ಅತ್ಯಾಚಾರ; ಕಿರುಚಾಟ ಕೇಳಿ ರಕ್ಷಣೆಗೆ ಬಂದ ಮೂವರು ಮಾಡಿದ್ದನ್ನು ಕೇಳಿದ್ರೆ ನೀವೇ ಶಾಕ್ ಆಗ್ತೀರಿ….

Pinterest LinkedIn Tumblr

ರಾಯ್ಪುರ: 24 ವರ್ಷದ ವಿಧವೆಯ ಮೇಲೆ ಪ್ರಿಯಕರನೇ ಅತ್ಯಾಚಾರ ಮಾಡಿದ್ದು, ಕಿರುಚಾಟ ಕೇಳಿ ಬಂದ ಮೂವರು ಕೂಡ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಢದ ರಾಯ್‍ಪುರ್ ಜಿಲ್ಲೆಯಲ್ಲಿ ನಡೆದಿದೆ.

ನಾಲ್ವರು ಆರೋಪಿಗಳಾದ ಸುರೇಶ್ ಸಾಹು (24), ಹರೀಶ್ ಚಂದ್ರಕರ್ (25), ತ್ರಿನಾಥ್ ಮಹಾನಂದ್ (24) ಮತ್ತು ವಿನಯ್ ಯಾದವ್ (24) ನನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 23 ರಂದು ಕಾಪಾ ಪ್ರದೇಶದ ರೈಲ್ವೆ ಯಾರ್ಡ್ ಸಮೀಪ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಂತ್ರಸ್ತ ಮಹಿಳೆ ಹೋಟೆಲ್‍ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಆರೋಪಿ ಸುರೇಶ್ ಸಾಹು ಜೊತೆ ಸಂಬಂಧವಿತ್ತು. ಆತ ಸಂತ್ರಸ್ತೆಯನ್ನು ಕಾಪಾ ಪ್ರದೇಶದ ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಕಿರುಚಾಟ ಕೇಳಿ ಸ್ಥಳಕ್ಕೆ ಮೂವರು ವ್ಯಕ್ತಿಗಳು ಬಂದಿದ್ದಾರೆ. ಅವರು ಸಾಹುವನ್ನು ಬೆದರಿಸಿದ್ದು, ಆತ ಅಲ್ಲಿಂದ ಓಡಿಹೋಗಿದ್ದಾನೆ. ಬಳಿಕ ಮೂವರು ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಈ ವಿಚಾರವನ್ನು ಬಹಿರಂಗಪಡಿಸಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಂತ್ರಸ್ತೆಗೆ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ಸಂತ್ರಸ್ತೆ ಸಮೀಪದ ಪಂಡ್ರಿ ಪೊಲೀಸ್ ಠಾಣೆಗೆ ಬಂದು ಭಾನುವಾರ ದೂರು ನೀಡಿದ್ದಾರೆ. ಮಂಗಳವಾರ ಆರೋಪಿಗಳನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376ರ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

Comments are closed.