ರಾಷ್ಟ್ರೀಯ

ಕರ್ನಾಟಕದ ಚುನಾವಣೆಗೆ ಯೋಗಿ ಆದಿತ್ಯನಾಥ್ ಸ್ಟಾರ್ ಪ್ರಚಾರಕ?

Pinterest LinkedIn Tumblr


ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಟಾರ್ ಪ್ರಚಾರಕರನ್ನಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯಕ್ಕೆ ಕರೆತರಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆ.

ಗುಜರಾತ್‌ನಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಿದ ಕಡೆಗಳಲ್ಲಿ ಬಿಜೆಪಿಗೆ ಅನುಕೂಲವಾಗಿದೆ ಎನ್ನಲಾಗಿದ್ದು, ಆದ್ದರಿಂದ ರಾಜ್ಯದಲ್ಲೂ ಅವರಿಂದ ಪ್ರಚಾರ ನಡೆಸಲು ಕೇಂದ್ರ ನಾಯಕರು ಚಿಂತನೆ ನಡೆಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ 35 ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಿದ್ದರು. ಅವುಗಳಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಕಂಡಿರುವುದು ಪಕ್ಷದ ಆಂತರಿಕ ಸಮೀಕ್ಷೆಯಿಂದ ತಿಳಿದುಬಂದಿದೆ. ಆದ್ದರಿಂದ ರಾಜ್ಯದಲ್ಲಿ ಅವರನ್ನು ಪ್ರಮುಖ ಪ್ರಚಾರಕರನ್ನಾಗಿ ಕರೆತಂದು ಹಿಂದುತ್ವ ರಾಜಕೀಯದ ಸಹಜ ಪ್ರಚಾರಕ ಆದಿತ್ಯನಾಥ್ ಅವರನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಲು ಕರ್ನಾಟಕ ಸಜ್ಜಾಗಿದೆ ಎಂದು ತಿಳಿದುಬಂದಿದೆ.

Comments are closed.