ರಾಷ್ಟ್ರೀಯ

ನಾಸ್ಟ್ರಡಾಮಸ್ ಭವಿಷ್ಯದಂತೆ 21ನೇ ಶತಮಾನದ ಅತ್ಯುತ್ತಮ ನಟ ಭಾರತೀಯ: ಮೋದಿ ಕಿಚಾಯಿಸಿದ ಮೇವಾನಿ

Pinterest LinkedIn Tumblr


ಹೊಸದಿಲ್ಲಿ: ಪ್ರಧಾನಿ ಮೋದಿ ದಲಿತರನ್ನು ಬೆಂಬಲಿಸುವ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿರುವ ದಲಿತ ಕಾರ್ಯಕರ್ತ ಜಿಗ್ನೇಶ್ ಮೇವಾನಿ 21ನೇ ಶತಮಾನದ ಅತ್ಯುತ್ತಮ ನಟ ಭಾರತದವರಾಗಿತ್ತಾರೆ ಎಂದು ಫ್ರೆಂಚ್ ಜ್ಯೋತಿಷಿ ನಾಸ್ಟ್ರಡಾಮಸ್ ಭವಿಷ್ಯ ನುಡಿದಿದ್ದರು ಎಂದು ಕಿಚಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೇವಾನಿ, ಪ್ರಧಾನಿ ನರೇಂದ್ರ ಮೋದಿ ಭಾಷಣದ ಒಂದೆರಡು ತುಣುಕುಗಳನ್ನು ಪೋಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ದಲಿತ ಸಮುದಾಯದ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಟ್ವೀಟ್ ಮಾಡಲಾಗಿದೆ.

ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗುಜರಾತ್ ಕಾಂಗ್ರೆಸ್ ಶಾಸಕ, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ವಿರುದ್ಧ ದೂರು ದಾಖಲಾಗಿದೆ.

ಕಳೆದ ಡಿಸೆಂಬರ್ 31ರಂದು ಎಲ್ಗಾರ್ ಪರಿಷದ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೇವಾನಿ ಭಾಗಿಯಾಗಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದದ್ದರು.

Comments are closed.