
ಹೊಸದಿಲ್ಲಿ: ರಾಜ್ಯ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ದಿಲ್ಲಿಯ ಪ್ರಧಾನಿ ಅಧಿಕೃತ ನಿವಾಸದಲ್ಲಿ ಗುರುವಾರ ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಬಿಜೆಪಿಯ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಚುನಾವಣೆಯಲ್ಲಿ ಪ್ರಚಾರ ಕಾರ್ಯತಂತ್ರ ಮತ್ತು ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲಾಗಿದೆ. ತ್ರಿಪುರಾ, ಮೇಘಾಲಯ ರಾಜ್ಯಗಳ ಚುನಾವಣೆ ಹಾಗೂ ಮುಂದಿನ ತಿಂಗಳು ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೂ ಈ ಸಭೆ ಮಹತ್ವ ಪಡೆದಿದೆ.
Comments are closed.