ರಾಷ್ಟ್ರೀಯ

ಅಖಾಡಕ್ಕೆ ರಾಹುಲ್‌ ಎಂಟ್ರಿ: ಕೈ ನಾಯಕರೊಂದಿಗೆ ಮಹತ್ವದ ಚರ್ಚೆ

Pinterest LinkedIn Tumblr


ಹೊಸದಿಲ್ಲಿ: ರಾಜ್ಯ ವಿಧಾನಸಭಾ ಚುನಾವಣೆಯ ಭರ್ಜರಿ ಪ್ರಚಾರಕ್ಕಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸಿದ್ಧರಾಗುತ್ತಿದ್ದು, ಇಂದು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮತ್ತು ಪ್ರಮುಖ ಕಾಂಗ್ರೆಸ್‌ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿ ಸುಧೀರ್ಘ‌ ಮಾತುಕತೆ ನಡೆಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ‘ರಾಹುಲ್‌ ಗಾಂಧಿ ಅವರು ಫೆಬ್ರವರಿ 10, 11 ಮತ್ತು 12 ರಂದು ರಾಜ್ಯದ ವಿವಿಧೆಡೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ಮಹಿಳೆಯರು, ವಿದ್ಯಾರ್ಥಿಗಳು , ರೈತರು ಸೇರಿದಂತೆ ವಿವಿಧ ವರ್ಗಗಳ ಜನರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ’ಸಭೆಯಲ್ಲಿ ಚುನಾವಣೆ ತಯಾರಿ ಕುರಿತಾಗಿ ಚರ್ಚೆ ನಡೆಸಲಾಯಿತು .ನಮ್ಮಿಂದ ಅವರು ಚುನಾವಣಾ ಸಿದ್ಧತೆಯ ಕುರಿತು ಮಾಹಿತಿ ಪಡೆದರು. ಸರ್ಕಾರದ ಅಭಿವೃದ್ಧಿ ಕಾರ್ಯಗಳ ಕುರಿತೂ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು’ಎಂದರು.

ಇದೇ ವೇಳೆ ‘ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ ಇಲ್ಲ .ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸಿದ್ದೇವೆ. ಬಿಜೆಪಿಯವರಿಗೆ ಹಿಂದುತ್ವ ಬಿಟ್ಟು ಬೇರೆ ವಿಷಯವೇ ಇಲ್ಲ. ಅಮಿತ್‌ ಶಾ, ಯೋಗಿ ಬಂದು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ ಇನ್ನು ಮೋದಿ ಬಂದರೂ ಅದನ್ನೇ ಮಾತನಾಡುತ್ತಾರೆ’ ಎಂದರು.

-ಉದಯವಾಣಿ

Comments are closed.