
ಮೀರತ್: ಉತ್ತರ ಪ್ರದೇಶದ ಘಾಜಿಯಾಬಾದ್ನ ಮೊಡಿನಗರ್ ಪ್ರದೇಶದ ಪಾದ್ರಿ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿಯ ಶವ ಪಾರ್ತಪುರ್ ಪ್ರದೇಶದ ಗದ್ದೆಯಲ್ಲಿ ಪತ್ತೆಯಾಗಿದೆ. ಬಾಲಕಿಯ ದೇಹದ ಮೇಲೆ ಸಿಗರೇಟಿನಿಂದ ಸುಟ್ಟ ಗಾಯಗಳು ಪತ್ತೆಯಾಗಿವೆ.
ಪುತ್ರಿ ಕಾಣೆಯಾದ ಬಗ್ಗೆ ಪಾದ್ರಿ ಮೊಡಿನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ‘ನನ್ನ ಅಪ್ರಾಪ್ತ ವಯಸ್ಕ ಮಗಳನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಈ ಬಗ್ಗೆ ಮೊಡಿನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಪಾದ್ರಿ ಆರೋಪಿಸಿದ್ದಾರೆ.
ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಲಪಂಥೀಯ ಸಂಘಟನೆಯ ಕೈವಾಡ ಇದೆ ಎಂದು ಆರೋಪಿಸಿರುವ ಸ್ಥಳೀಯರು, ಶನಿವಾರ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
‘ಪ್ರಕರಣದ ತನಿಖೆಗೆ ಹಲವು ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಘಾಜಿಯಾಬಾದ್ನ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಮೌರ್ಯ ತಿಳಿಸಿದ್ದಾರೆ.
Comments are closed.