ರಾಷ್ಟ್ರೀಯ

ಮುಖ್ಯಮಂತ್ರಿ ನಿವಾಸದೆದುರೇ ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ

Pinterest LinkedIn Tumblr


ಭೋಪಾಲ್: ಅತ್ಯಾಚಾರ ಸಂತ್ರಸ್ತೆಯೊಬ್ಬರು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಿವಾಸದೆದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ತನ್ನ ಮೇಲೆ ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿದುಬಂದಿದೆ.

ಸದ್ಯ ಸಂತ್ರಸ್ತೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಹಮೀದಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತ್ಯಾಚಾರ ಪ್ರಕರಣದ ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರಬಂದು ರಾಜಾರೋಷವಾಗಿ ಅಡ್ಡಾಡುತ್ತಿದ್ದಾನೆಂದು ಹೇಳಲಾಗುತ್ತಿದೆ.

ಕಳೆದ ಡಿಸೆಂಬರ್‌ನಲ್ಲಿ ಮಧ್ಯ ಪ್ರದೇಶದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರಯೊಂದನ್ನು ಬರೆದಿದ್ದು, ಆತ್ಮರಕ್ಷಣೆಗಾಗಿ ಮಹಿಳೆಯರಿಗೆ ಗನ್ ಪರವಾನಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿತ್ತು.

Comments are closed.