ರಾಷ್ಟ್ರೀಯ

ಗಣರಾಜ್ಯೋತ್ಸವ ಪರೇಡ್‌: ರಾಹುಲ್‌ ಗಾಂಧಿಗೆ ನಾಲ್ಕನೇ ಸಾಲಿನಲ್ಲಿ ಸ್ಥಾನ, ಕಾಂಗ್ರೆಸ್‌ ನಾಯಕರ ಕಿಡಿ

Pinterest LinkedIn Tumblr


ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ನಾಳಿನ ಗಣರಾಜ್ಯೋತ್ಸವಕ್ಕೆ ಭಾಗವಹಿಸಲು ಆಹ್ವಾನ ನೀಡಿದ್ದು, ಪರೇಡ್‌ ವೇಳೆ ನಾಲ್ಕನೇ ಸಾಲಿನಲ್ಲಿ ಸ್ಥಾನ ಕಲ್ಪಿಸಿರುವ ಕುರಿತು ಕಾಂಗ್ರೆಸ್‌ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿಂದಿನ ಗಣರಾಜ್ಯೋತ್ಸವಗಳಲ್ಲಿ ಕಾಂಗ್ರೆಸ್‌ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಸ್ಥಳ ನಿಗದಿ ಮಾಡಲಾಗುತ್ತಿತ್ತು. ರಾಜಕೀಯ ನಾಯಕರಿಗೆ ಮತ್ತು ಕೇಂದ್ರ ಸಚಿವರಿಗೆ ಯಾವ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಮೋದಿ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ರಾಹುಲ್‌ ಅವರಿಗೆ ಅಗೌರವ ತೋರಿದರೂ ಕೂಡ ಅವರು ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರದಿಂದಲೂ ಪಕ್ಷದ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಆಸನವನ್ನು ಕಾಯ್ದಿರಿಸಲಾಗುತ್ತಿತ್ತು. ಈ ಹಿಂದೆ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷೆಯಾಗಿದ್ದಾಗಲೂ ಅವರಿಗೆ ಮೊದಲ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗುತ್ತಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರಿಗೂ ಕೂಡ ಬಿಜೆಪಿ ಅಧಿಕಾರಕ್ಕೆ ಬಂದ 2014ರಿಂದಲೂ ಮೊದಲ ಸಾಲಿನಲ್ಲಿ ಆಸನವನ್ನು ಕಾಯ್ದಿರಿಸಲಾಗುತ್ತಿದೆ.

Comments are closed.