
Union minister Giriraj Singh
ಹೊಸದಿಲ್ಲಿ: ‘ಎಲ್ಲೆಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಿದೆಯೋ, ಅಲ್ಲೆಲ್ಲ ಸಾಮಾಜಿಕ ಸೌಹಾರ್ದತೆಗೆ ಭಂಗ ಬಂದಿದೆ’ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
‘ಈ ಜನಸಂಖ್ಯಾ ಬೆಳವಣಿಗೆಯನ್ನು ತಡೆಯದಿದ್ದರೆ ಭವಿಷ್ಯದಲ್ಲಿ 10 ಮಂದಿಯಲ್ಲಿ ಒಬ್ಬರಿಗೆ ಕುಡಿಯುವ ನೀರು ಸಿಗಲಾರದು ಎಂದು ವಿಶ್ವಸಂಸ್ಥೆ ಹೇಳಿದೆ. ಅಷ್ಟೇ ಅಲ್ಲ, ಸಾಮಾಜಿಕ ಸೌಹಾರ್ದತೆ ಮತ್ತು ಅಭಿವೃದ್ಧಿಗೂ ಇದು ಅಪಾಯಕಾರಿ. ಹಿಂದೂ ಜನಸಂಖ್ಯೆ ಕುಸಿದಲ್ಲೆಲ್ಲ ಸಾಮಾಜಿಕ ಸೌಹಾರ್ದಕ್ಕೆ ಭಂಗ ಬಂದಿದೆ’ ಎಂದು ಸಚಿವರು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಕಳೆದ ಕೆಲವು ದಿನಗಳಿಂದ ಸಚಿವರು ಟ್ವಿಟರ್ ಮೂಲಕ ಭಾರತದ ಜನಸಂಖ್ಯಾ ಬೆಳವಣಿಗೆ ತಡೆಯುವ ಬಗ್ಗೆ ಜಾಗೃತಿ ಮೂಡಿಸುವಂತೆ ಯುವಜನತೆಗೆ ಮನವಿ ಮಾಡುತ್ತಿದ್ದಾರೆ. ‘ಹೆಚ್ಚುತ್ತಿರುವ ಜನಸಂಖ್ಯೆ ನಿಮ್ಮ ಜೀವನಾಧಾರ ಮತ್ತು ಶಾಂತಿಯನ್ನು ಕಬಳಿಸುತ್ತದೆ. ಹೆಚ್ಚುತ್ತಿರುವ ಜನಸಂಖ್ಯೆ ಅಭಿವೃದ್ಧಿಯಲ್ಲಿ ನಿಮ್ಮ ಪಾಲನ್ನು ಮತ್ತು ಸಾಮಾಜಿಕ ಸೌಹಾರ್ದವನ್ನು ಕಬಳಿಸುತ್ತದೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.