ರಾಷ್ಟ್ರೀಯ

ಕೇಂದ್ರ ಸರ್ಕಾರಕ್ಕೆ ರೈತರಿಗಿಂತ ಉದ್ಯಮಿಗಳ ಬಗ್ಗೆ ಹೆಚ್ಚು ಕಾಳಜಿ ಇದೆ: ಅಣ್ಣಾ ಹಜಾರೆ

Pinterest LinkedIn Tumblr


ಸಾತ್ನ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರೈತರಿಗಿಂತ ಉದ್ಯಮಿಗಳ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಬುಧವಾರ ಆರೋಪಿಸಿದ್ದಾರೆ.

ಇಂದು ಮಧ್ಯಪ್ರದೇಶದ ಸಾತ್ನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಹಿರಿಯ ಹೋರಾಟಗಾರ, ಕಳೆದ 70 ವರ್ಷಗಳಲ್ಲಿ ದೇಶದಲ್ಲಿ ಸುಮಾರು 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ಕೇಂದ್ರ ಸರ್ಕಾರ ರೈತರಿಗಿಂತ ಅಂಬಾನಿ, ಅದಾನಿಯಂತಹ ಉದ್ಯಮಿಗಳ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ. ನಾನು ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ರೈತರ ಬೆಳೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವುದಾಗಿ ಹಜಾರೆ ತಿಳಿಸಿದರು.

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದ್ದರು. ಆದರೆ ಆ ಭರವಸೆ ಇದುವರೆಗೂ ಈಡೇರಿಲ್ಲ ಎಂದು ವಾಗ್ದಾಳಿ ನಡೆಸಿದರು.

Comments are closed.