ರಾಷ್ಟ್ರೀಯ

ಮೇ 6ರಂದು ನೀಟ್‌, ಆಧಾರ್‌ ಕಡ್ಡಾಯ

Pinterest LinkedIn Tumblr


ಹೊಸದಿಲ್ಲಿ: ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಮೇ 6ರಂದು ನಡೆಯಲಿದೆ.

ಪರೀಕ್ಷೆಗೆ ಆನ್‌ಲೈನ್‌ ಮೂಲಕ ನೋಂದಾಯಿಸಿಕೊಳ್ಳಲು ಫೆ.9ರಿಂದ ಮಾ.9ರತನಕ ಮತ್ತು ಶುಲ್ಕ ಪಾವತಿಗೆ ಮಾ.10ರ ತನಕ ಅವಕಾಶವಿದೆ. ಅಸ್ಸಾಂ, ಜಮ್ಮು-ಕಾಶ್ಮೀರ, ಮೇಘಾಲಯ ಹೊರತುಪಡಿಸಿ ಇತರ ಎಲ್ಲಾ ರಾಜ್ಯಗಳ ಅಭ್ಯರ್ಥಿಗಳು ಅರ್ಜಿಯಲ್ಲಿ ಕಡ್ಡಾಯವಾಗಿ ಆಧಾರ್‌ ಸಂಖ್ಯೆ ನಮೂದಿಸಬೇಕು. ಆಧಾರ್‌ ಸಂಖ್ಯೆ ಮತ್ತು ಅರ್ಜಿ ಸಲ್ಲಿಕೆಯಲ್ಲಿ ನೀಡಲಾದ ವಿವರಗಳು ಹೊಂದಾಣಿಕೆಯಾಗದಿದ್ದರೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.

ಹತ್ತು ಭಾಷೆಗಳಲ್ಲಿ: ಈ ವರ್ಷದಿಂದ ದೇಶಾದ್ಯಂತ ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿಯೂ ಏಕರೂಪದ ಪ್ರಶ್ನೆಗಳು ಇರಲಿವೆ. ದೇಶದಲ್ಲಿ 150 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಉಡುಪಿಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ಅಭ್ಯರ್ಥಿಗಳು ಸಿಬಿಎಸ್‌ಸಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ಮತ್ತು ಇಂಗ್ಲಿಷ್‌ನಲ್ಲಿ ಶೇಕಡ 50ರಷ್ಟು ಅಂಕಗಳಿಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ನೀಟ್‌ ಪರೀಕ್ಷೆ ಬರೆಯಬಹುದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಕನಿಷ್ಠ ಶೇಕಡ 40 ಅಂಕಪಡೆದಿದ್ದರೆ ನೀಟ್‌ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.

ವಯೋಮಿತಿ: ನೀಟ್‌ಗೆ ಅರ್ಜಿ ಸಲ್ಲಿಸಲು ಕನಿಷ್ಠ 17 ವರ್ಷ ಮತ್ತು ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ/ಎಸ್‌ಟಿ, ಒಬಿಸಿ ಮತ್ತು ವಿಶೇಷಚೇತನರಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲಾಗಿದೆ.

Comments are closed.