ರಾಷ್ಟ್ರೀಯ

ಜಮ್ಮುವಿನಲ್ಲಿನ ಭಯೋತ್ಪಾದಕ ದಾಳಿಗಳಿಗೆ ಪಾಕ್ ತಕ್ಕ ಬೆಲೆ ತೆರಬೇಕಾಗುತ್ತೆ: ನಿರ್ಮಲಾ ಸೀತಾರಾಮನ್

Pinterest LinkedIn Tumblr

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸುತ್ತಿದ್ದು ಇದಕ್ಕೆ ಪಾಕಿಸ್ತಾನ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂತಹ ಅನರ್ಥಗಳಿಗೆ ಪಾಕಿಸ್ತಾನ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ನಮ್ಮ ಸೈನಿಕರ ಸಾವು ವ್ಯರ್ಥವಾಗಿ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಶನಿವಾರ ಜಮ್ಮು ಮತ್ತು ಕಾಶ್ಮೀರದ ಸಂಜ್ವಾನ್ ಸೇನಾ ಕ್ಯಾಂಪ್ ಗೆ ನುಗ್ಗಿದ ಮೂವರು ಶಸ್ತ್ರಸರ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದು ಭಾರತೀಯ ಯೋಧರ ಸಾವಿಗೆ ಕಾರಣಕರ್ತರಾಗಿದ್ದು ಈ ದಾಳಿಗೆ ಪಾಕಿಸ್ತಾನದಲ್ಲಿ ನೆಲೆಸಿರುವ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಅಜರ್ ಮಸೂದ್ ನೆರವು ನೀಡಿದ್ದು ಇದಕ್ಕೆ ಪಾಕಿಸ್ತಾನ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದರು.

ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು ಮೃತ ಮೂವರು ಭಯೋತ್ಪಾದಕರು ಪಾಕಿಸ್ತಾನದವರು. ಇವರನ್ನು ಗಡಿ ದಾಟಿಸಲು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಸಹಾಯ ಮಾಡಿದೆ. ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಪಾಕಿಸ್ತಾನ ಸರ್ಕಾರಕ್ಕೆ ನೀಡಲಾಗುವುದು. ಇದಕ್ಕೆ ಪಾಕಿಸ್ತಾನ ಸರ್ಕಾರ ಏನು ಕ್ರಮಕೈಗೊಳ್ಳದಿದ್ದರೆ ನಂತರ ಭಾರತೀಯ ಸೇನೆ ತನ್ನ ತಾಕತ್ತು ತೋರಿಸಲಿದೆ ಎಂದರು.

Comments are closed.