ರಾಷ್ಟ್ರೀಯ

ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜಿಸಿ ಮುಜುಗರಕ್ಕೀಡಾದ ಬಿಜೆಪಿ ಸಚಿವ!

Pinterest LinkedIn Tumblr


ಜೈಪುರ: ರಾಜಸ್ಥಾನ ಬಿಜೆಪಿ ಸರಕಾರಕ್ಕೆ ಮುಜುಗರವನ್ನುಂಟು ಮಾಡವ ಘಟನೆ ನಡೆದಿದೆ. ಇಲ್ಲಿನ ಪಿಂಕ್ ಸಿಟಿಯಲ್ಲಿ ರಸ್ತೆ ಬದಿಯಲ್ಲಿ ಆರೋಗ್ಯ ಸಚಿವ ಕಾಲಿಚಂದ್ರನ್ ಸರಾಫ್ ಮೂತ್ರ ವಿಸರ್ಜನೆ ಮಾಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸ್ವಚ್ಛ ಭಾರತ ಅಭಿಯಾನದ ಪಟ್ಟಿಯಲ್ಲಿ ನಗರವನ್ನು ಅಗ್ರಸ್ಥಾನಕ್ಕೇರಿಸಲು ಜೈಪುರ್ ಮುನ್ಸಿಪಲ್ ಕಾರ್ಪೊರೇಷನ್ ಹರಸಾಹಸ ಪಡುತ್ತಿದೆ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರೊಬ್ಬರು ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುವ ವ್ಯಕ್ತಿಗಳಿಗೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ.

ಘಟನೆ ಸಂಬಂಧ ಮಾಹಿತಿ ಪಡೆಯಲು ಐಎಎನ್‌ಎಸ್ ಸಚಿವರನ್ನು ಸಂಪರ್ಕಿಸಲು ಪ್ರಯತ್ನಿದ್ದು, ಸಚಿವರ ಫೋನ್ ಸ್ವಚ್ ಆಫ್ ಆಗಿದೆ. ಈ ಬಗ್ಗೆ ಮಾಧ್ಯಮಗಳು ಸಚಿವರನ್ನು ಪ್ರಶ್ನಿಸಿದಾಗ, ಪ್ರತಿಕ್ರಿಯೆ ನೀಡಲು ಇದೇನು ದೊಡ್ಡ ವಿಷಯವೇ ಅಲ್ಲ ಎಂದು ಸಚಿವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ.

ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಕೇಂದ್ರ ಸರಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದರೆ, ಬಿಜೆಪಿಯ ಇಂತಹ ನಾಯಕರ ಕೃತ್ಯ ಸಾರ್ವಜನಿಕರಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಇದೊಂದು ನಾಚಿಕೆಗೇಡಿನ ಕೆಲಸ ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಉಪಾಧ್ಯಕ್ಷೆ ಅರ್ಚನಾ ಶರ್ಮಾ ಜರಿದಿದ್ದಾರೆ.

Comments are closed.