ಮುಂಬೈ: ಡೈಮಂಡ್ ಕಿಂಗ್ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಪಾರ ಪ್ರಮಾಣದ ಹಣ ವಶಕ್ಕೆ ಪಡೆದುಕೊಂಡಿದ್ದಾಗಿ ತಿಳಿದುಬಂದಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ವಂಚನೆ ಬಯಲಿಗೆ ಬರುತ್ತಿದ್ದಂತೆ ಉದ್ಯಮಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಸೂರತ್ ನ ಮೂರು, ಮುಂಬೈನ ನಾಲ್ಕು ಮತ್ತು ದೆಹಲಿಯ 2 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿ ವಿರುದ್ಧ ಸುಮಾರು 11,300 ಕೋಟಿ ಅಕ್ರಮ ಹಣ ವ್ಯವಹಾರ ಮಾಡಿರುವ ಪ್ರಕರಣ ದಾಖಲಾಗಿದ್ದು ಪ್ರಸ್ತುತ ಉದ್ಯಮಿ ನೀರವ್ ಮೋದಿ ತಲೆಮರೆಸಿಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯ ನೀರವ್ ಮೋದಿ ಕಚೇರಿಗಳಿಂದ ಅಪಾರ ಪ್ರಮಾಣದ ಡೈಮಂಡ್ಸ್, ಜ್ಯುವೆಲ್ಲರಿ, ಬಂಗಾರ ಸೇರಿದಂತೆ 5100 ಕೋಟಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.