ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಂಬಂಧಿಸಿದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತೆ 21 ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, 25 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದೆ.
ಭಾರತದಾದ್ಯಂತ 21 ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು ಒಟ್ಟು 5,674 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಫೆ.16 ರಂದು 35 ಕಡೆಗಳಲ್ಲಿ ದಾಳಿ ನಡೆಸಲಾಗಿತ್ತು, ಈ ವೇಳೆ 549 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೀರಾವ್ ಮೋದಿ ಹಾಗೂ ಆತನ ಸಂಸ್ಥೆಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.