ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐನಿಂದ ಲುಕ್ ಔಟ್ ನೋಟಿಸ್ ಪಡೆದಿರುವ ನೀರವ್ ಮೋದಿ ಮಕಾವ್ ಮತ್ತು ಕೌಲಾಲಂಪುರದಲ್ಲಿ ಎರಡು ಆಭರಣ ಶೋರೂಂಗಳನ್ನು ತೆರೆದಿದ್ದಾರೆ. ಇನ್ನು ಈ ಶೋರೂಂಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪಡೆದ ಹಣವೇ ಅಥವೇ ಬೇರೆ ಆದಾಯದ ಮೂಲದ್ದೇ ಎಂಬ ಹಲವು ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಈ ಬಗ್ಗೆಯೂ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪ್ರಸ್ತುತ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಿಸಿದ್ದರು.