ನೂರ್ಪುರ: ಉತ್ತರ ಪ್ರದೇಶದ ಸೀತಾಪುರದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಲಖನೌನಲ್ಲಿ ನಡೆಯುತ್ತಿರುವ ಇನ್ವೆಸ್ಟರ್ ಮೀಟ್ ನಲ್ಲಿ ಭಾಗವಹಿಸುವ ಸಲುವಾಗಿ ತೆರಳುತ್ತಿದ್ದ ಬಿಜೆಪಿ ಶಾಸಕ ಸೇರಿ ನಾಲ್ವರು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ಉತ್ತರಪ್ರದೇಶದ ಸೀತಾಪುರ ಬಳಿ ಫಾರ್ಚೂನರ್ ಕಾರಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಎದುರಿಗೆ ಬಂದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಿಜನೂರಿನ ಶಾಸಕ ಲೋಕೇಂದ್ರ ಸಿಂಗ್, ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಪೊಲೀಸ್ ಗಾರ್ಡ್ ಗಳಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತ ಗನ್ ಮ್ಯಾನ್ ಗಳನ್ನು 28 ವರ್ಷದ ಬ್ರಿಜೇಶ್ ಮಿಶ್ರಾ ಮತ್ತು 30 ವರ್ಷದ ದೀಪಕ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಸರಿಕಾ ಮೋಹನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅನಂದ್ ಕುಲಕರ್ಣಿ ತೆರಳಿ ಪರಿಶೀಲನೆ ನಡೆಸಿದರು.