ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ 3,695 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ರೊಟೊಮ್ಯಾಕ್ ಪೆನ್ ಸಂಸ್ಥೆ ಮಾಲೀಕ ವಿಕ್ರಮ್ ಕೊಠಾರಿ ಹಾಗೂ ಆತನ ಪುತ್ರ ರಾಹುಲ್‌ನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಹಲವು ಬ್ಯಾಂಕ್‌ಗಳಿಂದ ಸಾಲ ಪಡೆದು ಮರು ಪಾವತಿ ಮಾಡದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರನ್ನೂ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.
ಕಳೆದ ಕೆಲವು ದಿನಗಳಿಂದ ಇಬ್ಬರನ್ನೂ ವಿಚಾರಣೆಗೊಳಪಡಿಸಿ ಗುರುವಾರ ರಾತ್ರಿ ಬಂಧಿಸಿದ್ದಾರೆ
ವಿಕ್ರಮ್ ಕೊಠಾರಿ ಹಾಗೂ ಕುಟುಂಬ ಸದಸ್ಯರ ವಿರುದ್ಧ ಕಾಳಧನ ಸಕ್ರಮ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯ ಎಫ್‌ಐಆರ್ ಸಲ್ಲಿಸಿದೆ.
ವಿಕ್ರಮ್ ಕೊಠಾರಿ ಹಾಗೂ ಕುಟುಂಬ ಸದಸ್ಯರು ದೇಶ ಬಿಟ್ಟು ತೆರಳದಂತೆ ಅಧಿಕಾರಿಗಳು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಗೆ ನಿಗಾ ಇಟ್ಟಿದ್ದಾರೆ.