ರಾಷ್ಟ್ರೀಯ

ಮಗ ಪ್ರೀತಿ ಮಾಡಿ ಯುವತಿಯೊಂದಿಗೆ ಓಡಿಹೋಗಿದ್ದಕ್ಕೆ ತಾಯಿಯನ್ನ ಕಂಬಕ್ಕೆ ಕಟ್ಟಿ ಥಳಿಸಿದ್ರು

Pinterest LinkedIn Tumblr

ಗಾಂಧಿನಗರ: ಮಗ ಪ್ರೀತಿ ಮಾಡಿ ಯುವತಿಯೊಂದಿಗೆ ಪರಾರಿ ಆಗಿದ್ದಕ್ಕೆ ಆತನ ತಾಯಿಯನ್ನು ಕೊಟ್ಟಿಗೆಯಲ್ಲಿ ಕಟ್ಟಿ ಥಳಿಸಿರುವ ಅಮಾನವೀಯ ಘಟನೆಯೊಂದು ಗುಜರಾತ್ ನ ನರ್ಮದಾ ಜಿಲ್ಲೆಯ ಬಿತಾಡಾ ಗ್ರಾಮದಲ್ಲಿ ನಡೆದಿದೆ.

ಫೆಬ್ರವರಿ 16ರಂದು ಈ ಅಮಾನವೀಯ ಘಟನೆ ನಡೆದಿದೆ. ಮಹಿಳೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಇಬ್ಬರೂ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿ ಊರು ಬಿಟ್ಟು ಓಡಿ ಹೋಗಿದ್ದರು. ಈ ಸಂಬಂಧ ಗ್ರಾಮದಲ್ಲಿ ಎರಡೂ ಕುಟುಂಬಗಳ ನಡುವೆ ಪಂಚಾಯ್ತಿ ಕೂಡ ಮಾಡಲಾಗಿತ್ತು. ಆದ್ರೆ ಪಂಚಾಯ್ತಿಯಿಂದ ಯಾವುದೇ ಪ್ರಯೋಜನವಾಗಿರಲಿಲ್ಲ. ಇದನ್ನೂ ಓದಿ: ಲವ್ವರ್ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಮಗಳು!

ಮಗಳು ಓಡಿ ಹೋಗಿದ್ದಕ್ಕೆ ಗ್ರಾಮದಲ್ಲಿ ಅವಮಾನಿತರಾದ ಆಕೆಯ ಪೋಷಕರು ಯುವಕನ ತಾಯಿಯನ್ನು ಹಿಡಿದು ತಂದು ಹಸುಗಳ ಕೊಟ್ಟಿಗೆಯಲ್ಲಿಯ ಕಂಬವೊಂದಕ್ಕೆ ಕಟ್ಟಿ ಥಳಿಸಿದ್ದಾರೆ. ನಂತರ ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಗ್ರಾಮಕ್ಕೆ ಆಗಮಿಸಿದ ಪೊಲೀಸರು ಕಂಬಕ್ಕೆ ಕಟ್ಟಲಾಗಿದ್ದ ಯುವಕನ ತಾಯಿಯನ್ನು ರಕ್ಷಣೆ ಮಾಡಿದ್ದಾರೆ.

Comments are closed.