ರಾಷ್ಟ್ರೀಯ

ಕೇಜ್ರಿವಾಲ್ ನಿವಾಸದ ಮೇಲೆ ಪೊಲೀಸ್ ದಾಳಿ: ಸಿಸಿಟಿವಿಯ ಹಾರ್ಡ್ ಡಿಸ್ಕ್ ಜಪ್ತಿ

Pinterest LinkedIn Tumblr


ದೆಹಲಿ: ಇತ್ತೀಚೆಗೆ ಆಪ್ ಶಾಸಕರು ಮುಖ್ಯ ಕಾರ್ಯದರ್ಶಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದರು.

ಶುಕ್ರವಾರ 60ಕ್ಕೂ ಅಧಿಕ ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಮುಖ್ಯಮಂತ್ರಿಗಳ ನಿವಾಸವನ್ನು ಹುಡುಕಾಡಿದ ನಂತರ ಬೆರಳಚ್ಚು ತಜ್ಞರು ಹಾಗೂ ಸೈಬರ್ ಕ್ರೈಮ್ ಪೊಲೀಸರು ಸಿಸಿಟಿವಿ ಹಾಗೂ ಇತರ ದಾಖಲೆಗಳನ್ನು ಸಂಗ್ರಹಿಸಿ ಅಲ್ಲಿನ ನೌಕರರನ್ನು ಪ್ರಶ್ನಿಸಿ ಮಾಹಿತಿ ಕಲೆ ಹಾಕಿದ್ದಾರೆ. 21 ಸಿಸಿಟಿವಿ ಫುಟೇಜ್, ಹಾರ್ಡ್‌ಡಿಸ್ಕ್ ಹಾಗೂ ಇತರ ದಾಖಲೆಗಳನ್ನು ಸಂಗ್ರಹಿಸಿದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಇಬ್ಬರು ಆಪ್ ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅಪ್ ಶಾಸಕರಾದ ಪ್ರಕಾಶ್ ಜರ್ವಾಲ್ ಹಾಗೂ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಗಿತ್ತು.

Comments are closed.