ರಾಷ್ಟ್ರೀಯ

ವಿಜ್ಞಾನಕ್ಕೆ ಭಾರತದ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: 41 ನೇ ಮನ್ ಕಿ ಬಾತ್ ನ ಸಂಚಿಕೆಯ ಮೂಲಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ವಿಜ್ಞಾನಕ್ಕೆ ಭಾರತದ ಕೊಡಿಗೆಯನ್ನು ಸ್ಮರಿಸಿದ್ದಾರೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಿಸಿದ್ದು, ವಿಜ್ಞಾನಕ್ಕೆ ಭಾರತದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

ವಿಜ್ಞಾನ ಹಾಗೂ ತಂತ್ರಜ್ಞಾನದ ಮೂಲಕ ಯಂತ್ರಗಳನ್ನು ನಮಗೆ ಹೇಗೆ ಬೇಕೋ ಹಾಗೆ ಉಪಯೋಗಿಸಿಕೊಳ್ಳಬಹುದಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಬಹುತೇಕ ಅಪಘಾತಗಳು ನಮ್ಮ ಅಜಾಗರೂಕತೆಯಿಂದ ನಡೆದಿದೆ. ನಾವು ಜಾಗರೂಕರಾಗಿದ್ದರೆ ಅಂತಹ ಅನೇಕ ಅಪಘಾತಗಳನ್ನು ತಡೆಯಬಹುದು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ವಿಪತ್ತುಗಳ ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವವರನ್ನು ಹಿರೋಗಳೆಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ ನಮ್ಮದು ವಿಪತ್ತು(ಅಪಾಯ) ಜಾಗೃತ ಸಮಾಜವಾಗಬೇಕು ಎಂದು ಹೇಳಿದ್ದಾರೆ.

Comments are closed.