ನವದೆಹಲಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಮತ್ತೆ ಹದಗೆಟ್ಟಿದ್ದು ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದಾರೆ. ಈಗಾಗಲೇ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಪರಿಕ್ಕರ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬಿಗಡಾಯಿಸಿದ್ದು ವೈದ್ಯರ ಸಲಹೆ ಮೇರೆಗೆ ಅಮೆರಿಕಾ ಆಸ್ಪತ್ರೆಗೆ ತೆರಳಿದ್ದಾರೆ.
ಮಂಗಳವಾರ ರಾತ್ರಿ ತೆರಳಿರುವ ಅವರು 6-8 ವಾರಗಳ ಕಾಲ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇನ್ನು ಅವರ ಅನುಪಸ್ಥಿತಿಯಲ್ಲಿ ಗೋವಾ ಆಡಳಿತವನ್ನು ಮೂವರು ಸಚಿವರು ನೋಡಿಕೊಳ್ಳಲಿದ್ದಾರೆ.