ರಾಷ್ಟ್ರೀಯ

ಮಧ್ಯಂತರ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಕಾರ್ತಿ ಚಿದಂಬರಂ

Pinterest LinkedIn Tumblr


ದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಣ ದುರ್ಬಳಕೆ ಪ್ರಕರಣದಲ್ಲಿ ತಮಗೆ ಮಧ್ಯಂತರ ರಕ್ಷಣೆ ನೀಡಬೇಕು, ಜಾರಿ ನಿರ್ದೇಶನಾಲಯ ನೀಡಿರುವ ಎಲ್ಲ ಸಮನ್ಸ್ ಗಳನ್ನು ರದ್ದುಗೊಳಿಸಬೇಕು ಎಂದು ಮನವಿಯೊಂದಿಗೆ ಆರೋಪಿ ಕಾರ್ತಿ ಚಿದಂಬರಂ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾರ್ತಿ ಅವರ ಅರ್ಜಿ ವಿಚಾರಣೆಯನ್ನು ಶುಕ್ರವಾರ ನ್ಯಾ.ಎಸ್.ರವೀಂದ್ರ ಭಟ್ ಅವರ ಪೀಠ ನಡೆಸಲಿದೆ. ಜಾರಿ ನಿರ್ದೇಶನಾಲಯದ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರ್ತಿಗೆ ಸಿಬಿಐ ಮತ್ತಷ್ಟು ದಿಗ್ಬಂಧನ ಹೇರಲು ಮುಂದಾಗಿದೆ. ಕಾರ್ತಿ ಅವರನ್ನು ನಾರ್ಕೊ ಅನಾಲಿಸಿಸ್ ಪರೀಕ್ಷೆಗೆ ಮುಂದಾಗಿದ್ದ ಸಿಬಿಐ ಅಧಿಕಾರಿಗಳು ಈಗ ಕಾರ್ತಿ ಅವರ ಸಿ.ಎ ಭಾಸ್ಕರನ್, ಇಂದ್ರಾಣಿ ಮುಕರ್ಜಿಯ ಹಾಗೂ ಪೀಟರ್ ಮುಕರ್ಜಿಯ ಅವರನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲು ಮುಂದಾಗಿದೆ. ಮಾರ್ಚ್ 9ರಂದು ನಡೆಯಲಿರುವ ವಿಚಾರಣೆ ವೇಳೆ ಸಿಬಿಐ ಈ ಅರ್ಜಿ ಸಲ್ಲಿಸಲು ಮುಂದಾಗಿದೆ. ಬುಧವಾರವೇ ಸಿಬಿಐ ನ್ಯಾಯಾಲಯದ ಮುಂದೆ ಈ ವಿಚಾರ ಪ್ರಸ್ತಾಪ ಮಾಡಿತ್ತಾದರೂ ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಅರ್ಜಿ ಸಲ್ಲಿಕೆ ಮಾಡುವಂತೆ ನಿರ್ದೇಶನ ನೀಡಿತ್ತು.

Comments are closed.