ರಾಷ್ಟ್ರೀಯ

ಉತ್ತರ ಪ್ರದೇಶದ ಮತದಾರನಾದ ದೆಹಲಿ ಮೂಲದ ವಿರಾಟ್ ಕೊಹ್ಲಿ !

Pinterest LinkedIn Tumblr

ಲಖನೌ: ಮೂಲತಃ ದೆಹಲಿ ಮೂಲದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ದಿಢೀರೆಂದು ಉತ್ತರಪ್ರದೇಶದ ಗೋರಖಪುರದ ಸಹಜನ್ವಾ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದಾರೆ.

ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಮಾ.11ರಂದು ಚುನಾವಣೆ ನಡೆಯಲಿದ್ದು ಮಾರ್ಚ್ 14ಕ್ಕೆ ಮತ ಎಣಿಕೆ ನಡೆಯಲಿದೆ.

ಆ ಕಾರಣಕ್ಕೆ ಸಹಜನ್ವಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಪರಿಶೀಲಿಸುತ್ತಿದ್ದಾಗ ಬೂತ್ ಅಧಿಕಾರಿ ಸುನೀತಾ ಚೌಬೆಗೆ 5 ದಿನಗಳ ಹಿಂದೆ ವಿಷಯ ಗೊತ್ತಾಗಿದೆ. ಅಲ್ಲಿ ಕೊಹ್ಲಿಯ ಮತದಾರ ಸಂಖ್ಯೆ 822 ಎಂದ ಚಿತ್ರ ಸಹಿತ ಲಗತ್ತಾಗಿದೆ. ಕೊಹ್ಲಿಯ ಹೆಸರು ಇಲ್ಲಿ ಹೇಗೆ ಬರಲು ಸಾಧ್ಯ ಎಂದು ಕೂಲಂಕುಶವಾಗಿ ಪರಿಶೀಲಿಸಿದ ನಂತರ ಇದು ಎಡವಟ್ಟು ಎಂದು ಗೊತ್ತಾಗಿದೆ. ಆದ್ದರಿಂದ ಪ್ರಕರಣದ ತನಿಖೆಗೆ ಆದೇಶಿಲಾಗಿದೆ.

Comments are closed.