ರಾಷ್ಟ್ರೀಯ

ತೆಲಂಗಾಣ: ಮಧ್ಯಾಹ್ನದ ಬಿಸಿಯೂಟಕ್ಕೆ ಇನ್ನು ಮೂರಲ್ಲ, 6 ಮೊಟ್ಟೆ

Pinterest LinkedIn Tumblr


ಹೈದರಾಬಾದ್: ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ತೆಲಂಗಾಣ ಸರಕಾರ ದಿಟ್ಟ ಕ್ರಮ ಕೈಗೊಂಡಿದೆ. ಹೌದು, ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೊಟ್ಟೆ ಭಾಗ್ಯವನ್ನು ದುಪ್ಪಟ್ಟುಗೊಳಿಸಲು ತೆಲಂಗಾಣ ಸರಕಾರ ನಿರ್ಧರಿಸಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಾರಕ್ಕೆ ಮೂರು ಮೊಟ್ಟೆಗಳನ್ನು ಆರಕ್ಕೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ.

ಶುಕ್ರವಾರ ನಡೆದ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದ ತೆಲಂಗಾಣ ಶಿಕ್ಷಣ ಸಚಿವ ಕಡಿಯಮ್ ಶ್ರೀಹರಿ, ‘ಸರಕಾರಿ ಶಾಲೆಯ 23 ಲಕ್ಷ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ರಾಜ್ಯ ಸರಕಾರ 200 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆಹಾರದ ಪ್ರಮಾಣವನ್ನು ಹೆಚ್ಚಿಸಲು ಯೋಜಿಸಲಾಗುತ್ತಿದೆ. ಸದ್ಯ ಪ್ರತಿ ವಿದ್ಯಾರ್ಥಿಗಳಿಗೆ ವಾರಕ್ಕೆ ಮೂರು ಮೊಟ್ಟೆಗಳನ್ನು ನೀಡಲಾಗುತ್ತಿದ್ದು, ಈ ಪ್ರಮಾಣವನ್ನು 6ಕ್ಕೆ ಹೆಚ್ಚಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಮನವಿ ಸಲ್ಲಿಸಿದ್ದೇವೆ’ ಎಂದರು.

7-10ನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ನೈರ್ಮಲ್ಯ ಕಿಟ್‌ಗಳನ್ನು ನೀಡುವ ಬಗ್ಗೆ ಸರಕಾರ ಚಿಂತಿಸುತ್ತಿದೆ. ಪ್ರಸಕ್ತ ಸಾಲಿನ ಜೂನ್ ಅಂತ್ಯದೊಳಗೆ 8,792 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಕುಡಿಯುವ ನೀರಿನ ಸೌಲಭ್ಯವಿಲ್ಲದ ಶಾಲೆಗಳಿಗೆ ಶುದ್ಧ ನೀರಿನ ಸಂಪರ್ಕ ಒದಗಿಸುವುದಾಗಿ ಸಚಿವರು ಭರವಸೆ ನೀಡಿದರು.

Comments are closed.