ರಾಷ್ಟ್ರೀಯ

ಕುಮಟಾದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಸೂರಜ್‌ ದೆಹಲಿಯಲ್ಲಿ ಅರೆಸ್ಟ್‌

Pinterest LinkedIn Tumblr


ಹೊಸದಿಲ್ಲಿ: ಅಕ್ರಮ ಗೋಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕುಮಟಾದ ಬಿಜೆಪಿ ಮುಖಂಡ ಸೂರಜ್‌ ನಾಯ್ಕ ಸೋನಿ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.

ಮಾರ್ಚ್‌ 7 ರಂದು ಹೊನ್ನಾವರದಲ್ಲಿ ಭಟ್ಕಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಅಕ್ರಮ ಗೋಸಾಗಾಣಿಕೆದಾರರನ್ನು ತಡೆದು ಹಿಗ್ಗಾಮುಗ್ಗಾ ಥಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂರಜ್‌ ಸೇರಿದಂತೆ 127 ಜನರ ವಿರುದ್ಧ ಸೆಕ್ಷನ್‌ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೆಹಲಿಗೆ ಕಾರ್ಯ ನಿಮಿತ್ತ ತೆರಳಿದ್ದ ಸೂರಜ್‌ರನ್ನು ನಿಜಾಮುದ್ದೀನ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಸೂರಜ್‌ ಕಳೆದ ಬಾರಿ ಕುಮಟಾದ ಬಿಜೆಪಿ ಅಭ್ಯರ್ಥಿಯಾಗಿ ಸೋಲು ಅನುಭವಿಸಿದ್ದರು. ಈ ಬಾರಿಯೂ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

-ಉದಯವಾಣಿ

Comments are closed.