ರಾಷ್ಟ್ರೀಯ

2016ರಲ್ಲಿ ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲು : ಸುಪ್ರೀಂ ಕೋರ್ಟ್

Pinterest LinkedIn Tumblr

ನವದೆಹಲಿ: 2016ರಲ್ಲಿ ದೇಶಾದ್ಯಂತ ಸುಮಾರು ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿವೆ. ಈ ಪೈಕಿ ಕೇವಲ 229 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯದಲ್ಲಿ ಈ ವರ್ಷದಲ್ಲಿ ತೀರ್ಮಾನಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಮಾಹಿತಿ ನೀಡಿದೆ.

ಇತ್ಯರ್ಥಗೊಳ್ಳದ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಿ ಅವರ ವಿರುದ್ಧ ಪೋಕ್ಸೊ ಕಾಯ್ದೆ ದಾಖಲಿಸುವಂತೆ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ದೇಶದಲ್ಲಿನ ಎಲ್ಲಾ ಹೈಕೋರ್ಟ್ ಗಳ ರಿಜಿಸ್ಟ್ರಾರ್ ಜನರಲ್ ಗೆ ಸೂಚನೆ ನೀಡಿದ ನಂತರ ಈ ಅಂಕಿ ಅಂಶ ಬೆಳಕಿಗೆ ಬಂದಿದೆ.

ಇಂತಹ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯ ಚಾರ್ಚ್ ಶೀಟ್ ಸಲ್ಲಿಕೆಗೆ ಗಮನ ನೀಡಿದ ನಂತರ ಒಂದು ವರ್ಷದೊಳಗೆ ಇವುಗಳನ್ನು ತೀರ್ಮಾನಿಸಲು ಕಾಯ್ದೆಯಲ್ಲಿ ಅವಕಾಶವಿದೆ.

8 ತಿಂಗಳ ಬಾಲಕಿ ಮೇಲೆ ನಡೆದ ಅತ್ಯಾಚಾರ ಸಂಬಂಧ ವಕೀಲ ಅಲಾಕ್ ಅಲೋಕ್ ಶ್ರೀವಾಸ್ತವ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೊ 1, 01, 326 ಪೊಕ್ಸೊ ಪ್ರಕರಣಗಳಲ್ಲಿ 229 ಪ್ರಕರಣಗಳನ್ನು ಈ ವರ್ಷದಲ್ಲಿ ವಿಚಾರಣೆ ನಡೆಸಲು ವಿಚಾರಣಾ ನ್ಯಾಯಾಲಯ ತೀರ್ಮಾನಿಸಿದೆ ಎಂದು ತಿಳಿಸಿದೆ.

ನ್ಯಾಯಾಧೀಶರಾದ ಎ.ಎಂ. ಖನ್ವೀಲ್ ಕರ್ ಹಾಗೂ ಡಿ. ವೈ. ಚಂದ್ರಚೂಡ ಅವರು ಈ ಪೀಠದಲ್ಲಿದ್ದು, ಇತ್ಯರ್ಥಗೊಳ್ಳಬೇಕಾಗಿರುವ ಪ್ರಕರಣಗಳ ವಿಚಾರಣೆಗೆ ಪರಿಹಾರ ಒದಗಿಸಬೇಕಾಗಿದ್ದು, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಹೈಕೋರ್ಟ್ ಗಳಿಗೆ ಸೂಚನೆ ನೀಡಿದ್ದಾರೆ.

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಾಗುವ ಅತ್ಯಾಚಾರಕ್ಕೆ ಪ್ರಕರಣಗಳ ತನಿಖೆಗಾಗಿ ಸೂಕ್ತ ಮಾರ್ಗಸೂತ್ರ ರಚಿಸುವಂತೆಯೂ ಅರ್ಜಿಯಲ್ಲಿ ತಿಳಿಸಲಾಗಿದೆ. ಕಾರಣ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಲು 6 ತಿಂಗಳು ಪೂರ್ಣಗೊಂಡಿರಬೇಕಾಗುತ್ತದೆ.

ಇತ್ಯರ್ಥಗೊಳ್ಳದ ಪ್ರಕರಣಗಳ ಬಗ್ಗೆ ಜಿಲ್ಲಾ ವ್ಯಾಪಿ ಸಮಗ್ರ ಮಾಹಿತಿಯನ್ನು ಸಂಗ್ರಹಿಸುವಂತೆ ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ಗೆ ಸೂಚಿಸಿ ಮುಂದಿನ ವಿಚಾರಣೆನ್ನು ಏಪ್ರಿಲ್ 20ಕ್ಕೆ ಮುಂದೂಡಿದೆ.

Comments are closed.