ರಾಷ್ಟ್ರೀಯ

5 ವರ್ಷದ ಬಾಲೆ ಮೇಲೆ ರೇಪ್: ನೀಚ ಕಾಮುಕನ ಬಂಧನ

Pinterest LinkedIn Tumblr


ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಘಟನೆ ಬಳಿಕ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದ ಸಂತ್ರಸ್ತ ಬಾಲಕಿಯನ್ನು ಗಮನಿಸಿದ ಸಾರ್ವಜನಿಕರೊಬ್ಬರು ಆಕೆಯನ್ನು ವಿಚಾರಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ಎಎನ್‌ಐ ವರದಿ ಮಾಡಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನನ್ನು ಕಪುರ್ಬಾದಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸುಮನ್ ನಂದಕುಮಾರ್ ಝಾ (35) ಎಂದು ಗುರುತಿಸಲಾಗಿದೆ.

ಕಾಮುಕ ಆರೋಪಿ ಐಸ್-ಕ್ರೀಂ ಕೊಡಿಸುವ ಆಸೆ ತೋರಿಸಿ ಬಾಲಕಿಯನ್ನು ಮನೆಯಿಂದ ಆಜಾದ್ ನಗರಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಕಪುರ್ಬಾದಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Comments are closed.