ರಾಷ್ಟ್ರೀಯ

ಕಳೆದ 6 ವರ್ಷಗಳಲ್ಲಿ ಕೇಂದ್ರಿಯ ಸಶಸ್ತ್ರ ಪೊಲೀಸ್ ಪಡೆಯ 700 ಸಿಬ್ಬಂದಿ ಆತ್ಮಹತ್ಯೆ

Pinterest LinkedIn Tumblr


ನವದೆಹಲಿ: ಕಳೆದ 6 ವರ್ಷಗಳಲ್ಲಿ ಕೇಂದ್ರಿಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್)ಯ ಸುಮಾರು 700 ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಗುರುವಾರ ಸಂಸದೀಯ ಸಮಿತಿಗೆ ತಿಳಿಸಿದೆ.

ಕಳೆದ ಆರು ವರ್ಷಗಳಲ್ಲಿ ಕಾರ್ಯಾಚರಣೆ ವೇಳೆ ಹುತಾತ್ಮರಾದವರಿಗಿಂತ ಹಚ್ಚು ಸಿಎಪಿಎಫ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಥಿರತೆ, ಏಕಾಂಗಿತನ ಮತ್ತು ಕುಟುಂಬ ಕಲಹ ಸಿಎಪಿಎಫ್ ಸಿಬ್ಬಂದಿ ಆತ್ಮಹತ್ಯೆಗೆ ಕಾರಣ ಎಂದು ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಹಿರಿಯ ಅಧಿಕಾರಿಗಳು ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ನೇತೃತ್ವದ ಅಂದಾಜು ಸಮಿತಿಗೆ ಮಾಹಿತಿ ನೀಡಿದ್ದಾರೆ.

ಕಳೆದ ಆರು ವರ್ಷಗಳಲ್ಲಿ 700 ಸಿಎಪಿಎಫ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಪ್ರತಿ ವರ್ಷ 9 ಸಾವಿರ ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಅರೆ ಸೇನಾಪಡೆ ಸಿಬ್ಬಂದಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯಗೆ ಶರಣಾಗುತ್ತಿರುವುದರ ಬಗ್ಗೆ ಮತ್ತು ಅತಿ ಹೆಚ್ಚು ಸಂಖ್ಯೆಯಲ್ಲಿ ಸ್ವಯಂ ನಿವೃತ್ತಿ ಪಡೆಯುತ್ತಿರುವುದಕ್ಕೆ ಸಚಿವಾಲಯ ಈ ಉತ್ತರ ನೀಡಿದೆ.

ಗೃಹ ಸಚಿವಾಲಯದ ಮೂಲಗಳ ಪ್ರಕಾರ, 2012ರಿಂದ ಇದುವರೆಗೆ ಕೇಂದ್ರಿಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) 189 ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಕಾರ್ಯಾಚರಣೆ ವೇಳೆ 175 ಸಿಬ್ಬಂದಿ ಹುತಾತ್ಮರಾಗಿದ್ದಾರೆ.

Comments are closed.