ರಾಷ್ಟ್ರೀಯ

ಮೇವು ಹಗರಣ: ನಾಲ್ಕನೇ ಪ್ರಕರಣದಲ್ಲೂ ಲಾಲು ಪ್ರಸಾದ್ ಗೆ 7 ವರ್ಷ ಜೈಲು

Pinterest LinkedIn Tumblr

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಪ್ರಕರಣದಲ್ಲೂ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಲಾಲು ಪ್ರಸಾದ್ ಯಾದವ್ 7ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈ ಹಿಂದೆ ನಾಲ್ಕನೇ ಪ್ರಕರಣವಾದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿದ್ದ ರಾಂಚಿ ಸಿಬಿಐ ವಿಶೇಷ ಕೋರ್ಟ್, ಇಂದು ಪ್ರಕರಣದ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಅದರಂತೆ ಲಾಲು ಪ್ರಸಾದ್ ಯಾದವ್ ಗೆ 7 ವರ್ಷ ಜೈಲು ಶಿಕ್ಷೆ ಮತ್ತು 30 ಲಕ್ಷ ರೂ ದಂಡ ವಿಧಿಸಿದೆ.

ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣ ಇದಾಗಿದೆ. ಇದಕ್ಕೂ ಮೊದಲು ಮೇವು ಹಗರಣಕ್ಕೆ ಸಂಬಂಧಿಸಿದಂತೆ ಹೊರಬಿದ್ದ ಮೂರು ಪ್ರಕರಣಗಳಲ್ಲೂ ದೋಷಿ ಎಂದು ಪರಿಗಣಿಸಲಾಗಿದ್ದ ಲಾಲೂ ಯಾದವ್ ಜೈಲು ಶಿಕ್ಷೆಗೆ ಗುರಿಯಾಗಿದ್ದರು. 2013ರಲ್ಲಿ 5 ವರ್ಷ ಜೈಲು ಶಿಕ್ಷೆ, ಕಳೆದ ಡಿಸೆಂಬರ್ ನಲ್ಲಿ ಪ್ರಕಟವಾಗಿದ್ದ 2ನೇ ಪ್ರಕರಣದಲ್ಲೂ ಲಾಲು ದೋಷಿ ಎಂದು ತೀರ್ಪು ನೀಡಲಾಗಿತ್ತು. ಬಳಿಕ ಮೂರನೇ ಪ್ರಕರಣದಲ್ಲೂ ಲಾಲು ತಪ್ಪಿತಸ್ಥರು ಎಂದು ತೀರ್ಪು ನೀಡಲಾಗಿತ್ತು.

Comments are closed.