ರಾಷ್ಟ್ರೀಯ

ಕಾಶಿ ವಿಶ್ವನಾಥ ದೇಗುಲ ಪೊಲೀಸರಿಗೆ ಇನ್ನು ಧೋತಿ-ಕುರ್ತಾ ಸಮವಸ್ತ್ರ

Pinterest LinkedIn Tumblr


ವಾರಾಣಸಿ: ಇಲ್ಲಿನ ಪ್ರಸಿದ್ಧ, ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕಾಶಿ ವಿಶ್ವನಾಥ ದೇಗುಲದಲ್ಲಿ ಪೊಲೀಸರು ಹೊಸ ಸಮವಸ್ತ್ರದಲ್ಲಿ ಕಂಡುಬರುತ್ತಾರೆ.

ಕೆಲವು ವರ್ಷಗಳ ಹಿಂದೆ ದಾಳಿ ಭೀತಿ ಎದುರಿಸುತ್ತಿದ್ದ ಕಾಶಿ ವಿಶ್ವನಾಥ ದೇಗುಲಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಈಗ ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯ ಸಮೀಪ ಕಾರ್ಯ ನಿರ್ವಹಿಸುವ ಪೊಲೀಸರು ಕಡ್ಡಾಯವಾಗಿ ಧೋತಿ-ಕುರ್ತಾ ಧರಿಸಬೇಕಾಗಿದೆ.

ಈ ಕುರಿತು ಪೊಲೀಸ್‌ ವರಿಷ್ಠಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ 18 ಪೊಲೀಸರಿಗೆ ಧೋತಿ-ಕುರ್ತಾ ಸಮವಸ್ತ್ರವನ್ನು ಇಲಾಖೆಯಿಂದಲೇ ಪೂರೈಸಲಾಗಿದೆ.

ದೇಗುಲದಲ್ಲಿ ಹೊಸ ಸಮವಸ್ತ್ರದಲ್ಲಿ ಪೊಲೀಸರನ್ನು ಕಂಡು ಭಕ್ತಾಧಿಗಳು ಆಶ್ಚರ್ಯಚಕಿತರಾಗಿದ್ದಾರೆ.

ಈ ಹಿಂದೆ ಕೆಲವು ಭಕ್ತಾಧಿಗಳು ಪೊಲೀಸರು ಬೆಲ್ಟ್‌ ಧರಿಸಿ, ಇಲಾಖೆ ಸಮವಸ್ತ್ರದಲ್ಲಿಯೇ ಗರ್ಭಗುಡಿ ಬಳಿ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಈಗ ಪೊಲೀಸರು ಕಡ್ಡಾಯವಾಗಿ ಧೋತಿ-ಕುರ್ತಾ ಸಮವಸ್ತ್ರ ಧರಿಸಲು ಸೂಚಿಸಲಾಗಿದೆ.

Comments are closed.