ರಾಷ್ಟ್ರೀಯ

ಸಿಬಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೋಚಿಂಗ್‌ ಸೆಂಟರ್‌ ಮಾಲೀಕ, 6 ವಿದ್ಯಾರ್ಥಿಗಳ ಬಂಧನ

Pinterest LinkedIn Tumblr

ರಾಂಚಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಸಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತರಾ ಜಿಲ್ಲೆಯ ಆರು ವಿದ್ಯಾರ್ಥಿಗಳು ಹಾಗೂ ಕೋಚಿಂಗ್‌ ಸೆಂಟರ್‌ ಮಾಲೀಕನನ್ನು ಜಾರ್ಖಂಡ್‌ ಪೊಲೀಸರು ಬಂಧಿಸಿದ್ದಾರೆ.

10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸಂಬಂಧ ದೂರುಗಳು ದಾಖಲಾಗಿದ್ದವು.

ದೆಹಲಿ ಹಾಗೂ ಬಿಹಾರ ವಿದ್ಯಾರ್ಥಿಗಳಿಗೆ ಕಾನೂನುಬಾಹಿರವಾಗಿ ವಾಟ್ಸ್‌ಆ್ಯಪ್‌ ಮೂಲಕ ಪ್ರಶ್ನೆಪತ್ರಿಕೆಗಳನ್ನು ಮಾರಾಟ ಮಾಡಿದ್ದ ಅಂತರರಾಜ್ಯ ಗುಂಪನ್ನು ಗುರಿಯಾಗಿರಿಸಿ ಪೊಲೀಸರು ಬಲೆ ಬೀಸಿದ್ದರು. ಬಂಧಿತರ ಹೆಸರುಗಳನ್ನು ತಿಳಿಸಲು ನಿರಾಕರಿಸಿರುವ ಅವರು ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಪ್ರಕರಣ ಕುರಿತು ಮಾತನಾಡಿರುವ ಛತರಾ ಎಸ್‌ಪಿ ಅಖಿಲೇಶ್‌ ಬಿ ವೆರಿಯರ್‌, ‘ನಾವು ಕೆಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದೇವೆ. ಇನ್ನೂ ಕೆಲವರ ಬಂಧನವಾಗಬೇಕಿದ್ದು, ತನಿಖೆ ಪ‍್ರಗತಿಯಲ್ಲಿದೆ. ಇನ್ನು 24 ಗಂಟೆಗಳಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಲಿದ್ದೇವೆ’ ಎಂದು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆಗಳನ್ನು ಭಾರಿ ಮೊತ್ತಕ್ಕೆ ಮಾರಾಟ ಮಾಡಿರಬಹುದು. ಆದರೆ ನಿಖರವಾದ ಬೆಲೆ ಗೊತ್ತಾಗಿಲ್ಲ ಎಂದೂ ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Comments are closed.