ರಾಷ್ಟ್ರೀಯ

ಹಿಂದುಳಿದ ವರ್ಗಗಳ ನಾಯಕ ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿ ಸೇರ್ಪಡೆ

Pinterest LinkedIn Tumblr


ಹೊಸದಿಲ್ಲಿ: ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಹಾಗೂ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಮಾಜಿ ಸಚಿವರಾಗಿ ಸೇವೆ ಸಲ್ಲಿಸರುವ ಹಿಂದುಳಿದ ವರ್ಗಗಳ ನಾಯಕ ಮಾಲೀಕಯ್ಯ ಗುತ್ತೇದಾರ್‌ ಭಾನುವಾರ ಹೊಸದಿಲ್ಲಿಯಲ್ಲಿ ಬಿಜೆಪಿ ಸೇರಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಗುತ್ತೇದಾರ್‌ ಹಾಗೂ ಯಾದಗಿರಿ ನಗರಸಭೆಯ ಅಧ್ಯಕ್ಷೆ ಲಲಿತಾ ಅ೦ಪುರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್‌, ಸಂಸದ ಶ್ರೀರಾಮುಲು ಮುಂತಾದ ನಾಯಕರು ಹಾಜರಿದ್ದರು.

ಗುತ್ತೇದಾರ್‌ ಅವರು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರದ ವ್ಯಾಪ್ತಿಯ ಅಫ್ಜಲ್‌ಪುರ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Comments are closed.