ರಾಷ್ಟ್ರೀಯ

2019ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಗೆದ್ದರೆ, ಇಸ್ಲಾಂ ಧರ್ಮದ ಪ್ರಾಬಲ್ಯ ಹೆಚ್ಚಲಿದೆ: ಬಿಜೆಪಿ ಶಾಸಕ

Pinterest LinkedIn Tumblr


ವಾರಾಣಾಸಿ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಅಧಿಕಾರಕ್ಕೆ ಬಂದಲ್ಲಿ ಇಸ್ಲಾಂ ಧರ್ಮದ ಪ್ರಾಬಲ್ಯ ಹೆಚ್ಚಾಗಲಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರಾದ್ಯಂತ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿಯ ಭಾಗವಾಗಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದರನ್ನು ಉದ್ದೇಶಿಸಿ ಸಿಂಗ್‌ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ದೇವರ ಮೇಲೆ ನಂಬಿಕೆ ಇಟ್ಟಿದ್ದರೆ, ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಹಾಗೂ ಬಿಎಸ್‌ಪಿಯ ಮಾಯಾವತಿ ಇಸ್ಲಾಂ ಧರ್ಮದ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದರಂತೆಯೇ, ಕಾಂಗ್ರೆಸ್ಸಿನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೆರುಸಲೆಮ್‌ ಮೇಲೆ ವಿಶ್ವಾಸ ಹೊಂದಿದ್ದಾರೆ. ಹೀಗಾಗಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಅಧಿಕಾರದ ಗದ್ದುಗೆ ಹಿಡಿದರೆ, ದೇಶದಲ್ಲಿ ಇಸ್ಲಾಂ ಪಾರುಪತ್ಯ ಆರಂಭವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಸಿಂಗ್ ಹೇಳಿದರು.

Comments are closed.