ರಾಷ್ಟ್ರೀಯ

ರಾಜ್ಯದಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!

Pinterest LinkedIn Tumblr


ದೆಹಲಿ: ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗ ಹಾಗು ಉತ್ತರ ಭಾರತದ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಪ್ರದೇಶ ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಶನಿವಾರ ಸಂಜೆ ಹಾಗೂ ಭಾನುವಾರ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇನ್ನು ಈಶಾನ್ಯ ರಾಜ್ಯಗಳಾದ ಅಸ್ಸಾಂ, ನೇಘಾಲಯ, ನಾಗಾಲೆಂಡ್, ಮಣಿಪುರ, ಮಿಜೋರಾಮ್, ತ್ರಿಪುರಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗಾಳಿ ಸಮೇತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಆಂಧ್ರ ಪ್ರದೇಶದ ಕರಾವಳಿ, ರಾಯಲಸೀಮಾ, ತಮಿಳುನಾಡುಗಳಲ್ಲೂ ಜೋರಾದ ಗಾಳಿ ಸಮೇತ ಎಂದು ತಿಳಿಸಿದೆ.

Comments are closed.