ರಾಷ್ಟ್ರೀಯ

ಅಂಬೇಡ್ಕರ್ ಪ್ರತಿಮೆಗಳ ಧ್ವಂಸದ ಹಿಂದೆ ಕ್ರಿಶ್ಚಿಯನ್ ಮಿಷಿನರಿಗಳ ಕೈವಾಡ : ಬಿಜೆಪಿ ಸಂಸದ

Pinterest LinkedIn Tumblr

ಬಲಿಯಾ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಗಳ ಧ್ವಂಸ ಪ್ರಕರಣದ ಹಿಂದೆ ಕ್ರಿಶ್ಚಿಯನ್ ಮಿಷಿನರಿಗಳ ಕೈವಾಡ ಇದೆ ಎಂದು ಉತ್ತರ ಪ್ರದೇಶದ ಬಲಿಯಾ ಕ್ಷೇತ್ರದ ಬಿಜೆಪಿ ಸಂಸದ ಭರತ್ ಸಿಂಗ್ ಅವರು ಆರೋಪಿಸಿದ್ದಾರೆ.

ಶನಿವಾರ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದ, ಅಂಬೇಡ್ಕರ್ ಪ್ರತಿಮೆಗಳನ್ನು ಹಾನಿ ಮತ್ತು ಧ್ವಂಸಗೊಳಿಸುವಂತೆ ಕ್ರಿಶ್ಚಿಯನ್ ಮಿಷಿನರಿಗಳು ಸೂಚಿಸಿವೆ ಎಂದು ಗಂಭೀರ ಆರೋಪ ಮಾಡಿದರು. ಅಲ್ಲದೆ ಪ್ರತಿಮೆ ಧ್ವಂಸಗೊಳಿಸುತ್ತಿರುವ ದುಷ್ಕರ್ಮಿಗಳಿಗೆ ಮಿಷಿನರಿಗಳು ಹಣ ನೀಡುತ್ತಿವೆ ಎಂದು ದೂರಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗುತ್ತಿರುವುದನ್ನು ಸಹಿಸಿಕೊಳ್ಳದ ಕ್ರಿಶ್ಚಿಯನ್ ಮಿಷಿನರಿಗಳು ಈ ರೀತಿ ಮಾಡುತ್ತಿವೆ ಎಂದು ಭರತ್ ಸಿಂಗ್ ಅವರು ವಾಗ್ದಾಳಿ ನಡೆಸಿದರು.

ಕ್ರಿಶ್ಚಿಯನ್ ಮಿಷಿನರಿಗಳು ಹಣಕಾಸಿನ ಬೆಂಬಲ ನೀಡುವ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಗೆ ಮತಾಂತರಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ.

Comments are closed.