ರಾಷ್ಟ್ರೀಯ

ಈ ಬಾರಿ ಸಾಧಾರಣ ಮುಂಗಾರು: ಹವಾಮಾನ ಇಲಾಖೆ ಮುನ್ಸೂಚನೆ

Pinterest LinkedIn Tumblr


ಹೊಸದಿಲ್ಲಿ: ಈ ಬಾರಿ ದೇಶಾದ್ಯಂತ ಸಾಧಾರಣ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.

2018ರಲ್ಲಿ ಶೇಕಡ 97 ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸಾಧಾರಣ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ.

ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಮಾಡಿರುವ ವರದಿಯಲ್ಲೂ ಇಷ್ಟೇ ಪ್ರಮಾಣದ ಮಳೆಯಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಾಲ್ಕು ತಿಂಗಳ ಅವಧಿಯಲ್ಲಿ ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಧಾನ ನಿರ್ದೇಶಕ ಕೆ.ಜೆ. ರಮೇಶ್‌ ಮಾಹಿತಿ ನೀಡಿದ್ದಾರೆ.

ಮೇ ತಿಂಗಳ ಕೊನೆಯ ವಾರದಲ್ಲಿ ಅಥವಾ ಜೂನ್‌ ತಿಂಗಳ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರು ಅಪ್ಪಳಿಸುವ ಸಾಧ್ಯತೆ ಇದೆ.

ಮೇ ತಿಂಗಳ ಮಧ್ಯ ಅವಧಿಯಲ್ಲಿ ಇನ್ನಷ್ಟು ನಿಖರವಾಗಿ ಮಾಹಿತಿ ನೀಡಲಾಗುವುದು ಎಂದು ರಮೇಶ್‌ ವಿವರಿಸಿದ್ದಾರೆ.

ಕಳೆದ ವರ್ಷ ಕೂಡ ಸಾಧಾರಣ ಮುಂಗಾರು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿತ್ತು. ಅದರಂತೆ ಶೇಕಡ 95ರಷ್ಟು ಮಳೆಯಾಗಿತ್ತು.

2015, 2014ರಲ್ಲಿ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಿತ್ತು. ಆ ಎರಡೂ ವರ್ಷಗಳನ್ನು ಬರಪೀಡಿತ ಎಂದು ಘೋಷಿಸಲಾಗತ್ತು.

Comments are closed.