ರಾಷ್ಟ್ರೀಯ

ಮಧ್ಯಪ್ರದೇಶ: ದಿಬ್ಬಣದ ಬಸ್‌ ನದಿಗೆ ಬಿದ್ದು 21 ಮಂದಿ ದುರ್ಮರಣ

Pinterest LinkedIn Tumblr


ಭೂಪಾಲ್‌: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಘೋರ ದುರಂತವೊಂದರಲ್ಲಿ ಮದುವೆ ದಿಬ್ಬಣದ ಬಸ್‌ ನದಿಗೆ ಉರುಳಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 30ಕ್ಕೂಹೆಚ್ಚು ಮಂದಿ ಗಂಭೀ ರವಾಗಿ ಗಾಯಗೊಂಡಿದ್ದಾರೆ.

ಬಾಹ್ರಿ ಠಾಣಾ ವ್ಯಾಪ್ತಿಯ ಅಮೆಲಿಯಾ ಬಳಿಯ ಜೋಗ್‌ದಾಹ ಸೇತುವೆ ಬಳಿ ಅವಘಡ ನಡೆದಿದ್ದು , ಬಸ್‌ 70 ಅಡಿ ಆಳಕ್ಕೆ ಉರುಳಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿ ಹಲವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನು ಕೆಲವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಕ್ಕೆ ನೆರವು ನೀಡಿದರು.

ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತ ಪಡಿಸಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

-ಉದಯವಾಣಿ

Comments are closed.