ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಸ್ತುತ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಈತ ಸುಳ್ಳು ಸುದ್ದಿ ಹರಡುತ್ತಿದ್ದರಿಂದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. .ಈತ ಫೇಸ್‌ಬುಕ್‌ನಲ್ಲಿ ‘ಜಸ್ಟ್ ಗಾಟ್ ನ್ಯೂಸ್ ದಟ್ ಪರಿಕ್ಕರ್ ಈಸ್ ನೋ ಮೋರ್’ (ಈಗಷ್ಟೇ ಸುದ್ದಿ ತಿಳಿಯಿತು ಪರಿಕ್ಕರ್ ಕೊನೆಯುಸಿರೆಳೆದಿದ್ದಾರೆ) ಎಂದು ಪೋಸ್ಟ್ ಮಾಡಿದ್ದ.
ಹಲವು ದಿನಗಳಿಂದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪರಿಕ್ಕರ್ ಈ ಹಿಂದೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪರಿಕ್ಕರ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಅವರ ಜೊತೆ ತಾವು ಮಾತನಾಡಿರುವುದಾಗಿ ಗೋವಾ ಬಿಜೆಪಿ ಮುಖಂಡರು ತಿಳಿಸಿದ್ದಾರೆ.
Comments are closed.