ರಾಷ್ಟ್ರೀಯ

ವರದಕ್ಷಿಣೆ ತರಲು ಒಪ್ಪದಿದ್ದಾಗ ಸ್ನೇಹಿತರ ಜೊತೆ ಸೇರಿ ಪತ್ನಿಯ ಮೇಲೆ ಗ್ಯಾಂಗ್‍ರೇಪ್ ಮಾಡಿದ ಪತಿ

Pinterest LinkedIn Tumblr

ಗುವಾಹಟಿ: ಪಾಪಿ ಪತಿಯೊಬ್ಬ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಈ ಘಟನೆ ದಕ್ಷಿಣ ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನನ್ನ ಮದುವೆಯಾದ ನಂತರ ಪತಿ ವರದಕ್ಷಿಣೆಗಾಗಿ ಚಿನ್ನವನ್ನು ತರುವಂತೆ ಒತ್ತಾಯಿಸಿದ್ದಾನೆ. ಆದರೆ ಆತನ ಬೇಡಿಕೆಗೆ ನಾನು ಒಪ್ಪದಿದ್ದಕ್ಕೆ ಆತ ಸ್ನೇಹಿತರ ಜೊತೆ ಸೇರಿ ಏಪ್ರಿಲ್ 17 ರಂದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಅಂತಾ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ದೂರು ನೀಡಿದ ಬಳಿಕ ಆಕೆಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು, ವರದಿಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಆದ್ದರಿಂದ ಮೂವರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಸದ್ಯಕ್ಕೆ ಆರೋಪಿ ಪತಿಯನ್ನು ಬಂಧಿಸಿಲಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Comments are closed.