ರಾಷ್ಟ್ರೀಯ

ಕುಟುಂಬಗಳು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಿ: ಪ್ರಧಾನಿ ಮೋದಿ

Pinterest LinkedIn Tumblr

ಮಂಡ್ಲ: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪೂರಕವಾದ ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯಲಾಗಿದೆ. ಆದರೆ, ಕುಟುಂಬಗಳು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಧ್ಯಪ್ರದೇಶದ ಮಂಡ್ಲದಲ್ಲಿಂದು ರಾಷ್ಟ್ರೀಯ ಪಂಚಾಯತ್ ರಾಜ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಬಾಲಕಿಯರಿಗೆ ಸುರಕ್ಷತೆ ಹೆಚ್ಚಿಸುವುದು ಸಾಮಾಜಿಕ ಆಂದೋಲನವಾಗಿ ರೂಪುಗೊಳ್ಳಬೇಕಾಗಿದೆ ಎಂದು ಕರೆ ನೀಡಿದರು.

ನಿಮ್ಮ ಧ್ವನಿಯನ್ನು ಆಲಿಸಿ ಕೇಂದ್ರ ಸರ್ಕಾರ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲಿಗೇರಿಸುವ ನಿರ್ಧಾರ ಕೈಗೊಂಡಿದೆ. ಮುಗ್ದ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ತರಲಾಗಿದೆ ಎಂದು ತಿಳಿಸಿದರು.

ಆದಾಗ್ಯೂ, ಹೆಣ್ಣುಮಕ್ಕಳ ಸುರಕ್ಷತೆಗಾಗಿ ಸೂಕ್ತ ವಾತವಾರಣ ಸೃಷ್ಟಿಸಬೇಕಾಗಿದೆ. ಕುಟುಂಬದವರು ಅವರ ಹೆಣ್ಣುಮಕ್ಕಳಿಗೆ ಗೌರವ ನೀಡಬೇಕಾಗಿದೆ. ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು, ಹೆಣ್ಣುಮಕ್ಕಳಿಗೆ ಸುರಕ್ಷತೆ ಒದಗಿಸುವುದು ಕಷ್ಟಕರ ಕೆಲಸವಲ್ಲ, ಈ ನಿಟ್ಟಿನಲ್ಲಿ ಸಾಮಾಜಿಕ ಆಂದೋಲನ ಆರಂಭಿಸಲಾಗುವುದು ಎಂದು ಅವರು ಹೇಳಿದರು.

Comments are closed.