ರಾಷ್ಟ್ರೀಯ

ಶಾಲಾ ವಾಹನಕ್ಕೆ ರೈಲು ಢಿಕ್ಕಿ; 13 ಮಕ್ಕಳ ದುರ್ಮರಣ

Pinterest LinkedIn Tumblr

ಲಖನೌ: ಶಾಲಾವಾಹನಕ್ಕೆ ರೈಲು ಢಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಸುಮಾರು 13 ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಉತ್ತರ ಪ್ರದೇಶದ ಖುಷಿ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಖುಷಿನಗರ ಪಟ್ಟಣದ ಸಮೀಪದ ದೂಧಿ ಎಂಬಲ್ಲಿ ಗುರುವಾರ ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಇಲ್ಲಿನ ಕಾವಲು ರಹಿತ ಲೆವೆಲ್​ ಕ್ರಾಸಿಂಗ್​ನಲ್ಲಿ ಸ್ಕೂಲ್​ ವ್ಯಾನಿಗೆ ರೈಲು ಡಿಕ್ಕಿ ಹೊಡೆದು 13 ಮಕ್ಕಳು ಮೃತಪಟ್ಟಿದ್ದಾರೆ. ಅಂತೆಯೇ ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ ಶಾಲಾ ವಾಹನದಲ್ಲಿ ಸುಮಾರು 20 ರಿಂದ 30 ಮಂದಿ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಸಂತ್ರಸ್ಥರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ
ಇನ್ನು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಿಎಂ ಯೋಗಿಆದಿತ್ಯಾನಾಥ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಸಂತ್ರಸ್ಥರ ಕಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಅಂತೆಯೇ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮತ್ತು ಗಾಯಗೊಂಡವರಿಗೆ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜತೆಗೆ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Comments are closed.