
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಶಾಲಾ ಬಸ್ – ರೈಲು ನಡುವೆ ಡಿಕ್ಕಿ ಸಂಭವಿಸಿ 13 ಮಕ್ಕಳು ಮೃತಪಟ್ಟಿದ್ದಾರೆ. ಬಸ್ ಚಾಲಕ ಇಯರ್ ಫೋನ್ ಹಾಕಿಕೊಂಡು ಓಡಿಸುತ್ತಿದ್ದದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಕುಶಿ ನಗರದ ಬಳಿಯ ದುಧಿ ಎಂಬ ಮಾನವ ರಹಿತ ರೈಲ್ವೆ ಕ್ರಾಸಿಂಗ್ ಬಳಿ ವೇಗವಾಗಿ ಚಲಿಸುತ್ತಿದ್ದ ರೈಲು ಹಾಗೂ ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 20 ರಿಂದ 30 ಮಕ್ಕಳು ಚಲಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಅಪಘಾತದಲ್ಲಿ 8 ಮಕ್ಕಳಿಗೆ ಗಂಭೀರ ಗಾಯಗಳಾಗಿದೆ. ಬಸ್ ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಎಂದು ತಿಳಿದುಬಂದಿದೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.
Comments are closed.