ರಾಷ್ಟ್ರೀಯ

ರಾಜೀವ್‌ ಹತ್ಯೆ: ನಳಿನಿಗೆ ಬಿಡುಗಡೆ ಭಾಗ್ಯವಿಲ್ಲ

Pinterest LinkedIn Tumblr


ಚೆನ್ನೈ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ, ಶಿಕ್ಷೆಯ ಅವಧಿಗೂ ಮುನ್ನ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ.ಕೆ.ಕೆ.ಶಶಿಧರನ್‌ ಮತ್ತು ನ್ಯಾ. ಆರ್‌.ಸುಬ್ರಮಣಿಯನ್‌ ಅವರಿದ್ದ ವಿಭಾಗೀಯ ಪೀಠ ಏ. 24ರಂದು, ನಳಿನಿ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಕೂಡ ಇಂತಹದ್ದೇ ಪ್ರಕರಣ ಬಾಕಿ ಇರುವುದರಿಂದ ನಳಿನಿ ಅವರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ಗೆ ತಮಿಳುನಾಡು ಸರಕಾರ ಕಳೆದ ನವೆಂಬರ್‌ನಲ್ಲಿ ತಿಳಿಸಿತ್ತು.

ಸರಕಾರದ ಗೃಹ ಇಲಾಖೆಯ ಉಪ ಕಾರ್ಯದರ್ಶಿ ನಳಿನಿ ಸಲ್ಲಿಸಿದ ಮನವಿಗೆ ಮರು ಅಫಿಡವಿಟ್‌ ಸಲ್ಲಿಸಿದ್ದರು. ಅಲ್ಲದೆ, ಸಿಬಿಐ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ತನಿಖೆ ನಡೆಸಿರುವ ಪ್ರಕರಣಗಳಲ್ಲಿ, ಸಿಆರ್‌ಪಿಸಿ ಸೆಕ್ಷನ್‌ 435ರ ಅಡಿ ಅವಧಿಗೂ ಮುನ್ನ ಬಿಡುಗಡೆಗಾಗಿ ಕೇಂದ್ರ ಸರಕಾರದ ಒಪ್ಪಿಗೆ ಅಗತ್ಯ ಎಂದು ಮಾರ್ಚ್‌ 2016ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ನಳಿನಿ ಅರ್ಜಿಯನ್ನು ತಿರಸ್ಕರಿಸಲಾಗಿದೆ.

Comments are closed.