ರಾಷ್ಟ್ರೀಯ

ತನ್ನ ಪ್ರಿಯಕರ ಜೊತೆಗಿನ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ!

Pinterest LinkedIn Tumblr

ಭುವನೇಶ್ವರ್: ತನ್ನ ಪ್ರಿಯಕರ ಜೊತೆಗಿನ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ನಾಬರಂಗ್‍ಪುರದಲ್ಲಿ ನಡೆದಿದೆ.

ಬಾಲಕಿ ತನ್ನದೇ ಏರಿಯಾದ ಯುವಕನನ್ನು ಪ್ರೀತಿಸುತ್ತಿದ್ದಳು. ಆತನ ಜೊತೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಳು. ದೈಹಿಕ ಸಂಪರ್ಕ ಬೆಳೆಸಿದ ಆ ವಿಡಿಯೋವನ್ನು ಯುವಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾನೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಇಂದು ಬೆಳಗ್ಗೆ ಹತ್ತಿರದ ಕಾಡಿಗೆ ಹೋಗಿ ಅಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ದೊರೆತ್ತಿದ್ದು, ನಂತರ ಆಕೆಯ ಮೃತದೇಹವನ್ನು ಮನೆಗೆ ಕರೆತರಲಾಗಿತ್ತು.

ಗ್ರಾಮಸ್ಥರು ಆಕೆಯ ಮೃತದೇಹವನ್ನು ಕಾಡಿನಿಂದ ಆಕೆಯ ಮನೆಗೆ ತಂದರು. ನಂತರ ವೈರಲ್ ಆಗಿದ ಆಕೆಯ ವಿಡಿಯೋವನ್ನು ಗ್ರಾಮಸ್ಥರು ಬಾಲಕಿಯ ತಂದೆಗೆ ತೋರಿಸಿದ್ದರು. ಈ ವಿಡಿಯೋ ವೈರಲ್ ಆಗಿದ್ದಕ್ಕೆ ನಿನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗ್ರಾಮಸ್ಥರು ಬಾಲಕಿಯ ತಂದೆಗೆ ತಿಳಿಸಿದ್ದಾರೆ.

ಈ ಬಗ್ಗೆ ಬಾಲಕಿಯ ತಂದೆ ಜರಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಪ್ರಕರಣದ ನಂತರ ಯುವಕ ಪರಾರಿಯಾಗಿದ್ದಾನೆ. ಇನ್ನೂ ಬಾಲಕಿಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Comments are closed.