ರಾಷ್ಟ್ರೀಯ

ಕಾಂಗ್ರೆಸ್‌ನಿಂದ ಮೇಲು ವರ್ಗದ ಕಡೆಗಣನೆ: ಜೈರಾಂ ರಮೇಶ್‌

Pinterest LinkedIn Tumblr


ಹೊಸದಿಲ್ಲಿ: ಉತ್ತರದ ರಾಜ್ಯಗಳಲ್ಲಿ ಕಾಂಗ್ರೆಸ್‌ ಮೇಲು ವರ್ಗವನ್ನು ಕಡೆಗಣಿಸಿದೆ. ಆದರೆ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿ ಇಲ್ಲ ಎಂದು ಹಿರಿಯ ಕಾಂಗ್ರೆಸ್‌ ಮುತ್ಸದಿ ಜೈರಾಂ ರಮೇಶ್‌ ಹೇಳಿದ್ದಾರೆ.

ಟೈಮ್ಸ್‌ ಆಫ್‌ ಇಂಡಿಯಾದೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ದಕ್ಷಿಣದ ರಾಜ್ಯಗಳಲ್ಲಿನ ಕಾಂಗ್ರೆಸ್‌ ಹಾಗೂ ಉತ್ತರ ರಾಜ್ಯಗಳಲ್ಲಿನ ಕಾಂಗ್ರೆಸ್‌ ಆಡಳಿತಕ್ಕೆ ಸಾಕಷ್ಟು ವ್ಯತ್ಯಾಸಗಳಿವೆ. ಕರ್ನಾಟಕದಲ್ಲಿ ಹಿಂದಿನಿಂದಲೂ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಕೇರಳ, ಕರ್ನಾಟಕ, ಅವಿಭಿಜಿತ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಹಿಂದುಳಿದ ವರ್ಗಗಳನ್ನು ಓಲೈಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಇದು ಸಾಧ್ಯವಾಗಿಲ್ಲ ಎಂದಿದ್ದಾರೆ.

ದಕ್ಷಿಣ ಭಾರತದಲ್ಲಿ ಮೇಲು ವರ್ಗ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ಹೀಗಾಗಿ ಹೆಚ್ಚು ಅವಕಾಶಗಳಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುವ ಎಲ್ಲ ಸಾಧ್ಯತೆಗಳು ಇವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದಲ್ಲಿ ಮೋದಿ ಚುನಾವಣಾ ರ‍್ಯಾಲಿ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ರಾಜ್ಯದ ಜನತೆ ಕೇಂದ್ರದ ನಾಯಕರು ಹಾಗೂ ರಾಜ್ಯದ ನಾಯಕರನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. 1984ರಲ್ಲಿ ರಾಜೀವ್‌ ಗಾಂಧಿ 28ರಲ್ಲಿ 27 ಸೀಟುಗಳನ್ನು ಗೆದ್ದಿದ್ದರು. 1 ತಿಂಗಳ ಅಂತರದಲ್ಲಿ ನಡೆದ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆ ಬಹುಮತಗಳಿಸಿದ್ದರು ಎಂದು ಅವರು ವಿಶ್ಲೇಷಿಸಿದ್ದಾರೆ.

Comments are closed.