ಹೊಸದಿಲ್ಲಿ: ಉನ್ನಾವೋ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನಿಂದ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದನ್ನು ಸಿಬಿಐ ಪೊಲೀಸರು ಖಚಿತಪಡಿಸಿದ್ದಾರೆ.
2017ರ ಜೂ.4ರಂದು ಉತ್ತರ ಪ್ರದೇಶದ ಮಖಿ ಗ್ರಾಮದಲ್ಲಿನ ಮನೆಯೊಂದರಲ್ಲಿ ಬಾಲಕಿಯನ್ನು ಅತ್ಯಾಚಾರ ನಡೆಸಿರುವ ಬಗ್ಗೆ ಆರೋಪಿಸಲಾಗಿತ್ತು. ಈ ಸಂಬಂಧ ಕುಲದೀಪ್ ಸಹಾಯಕನನ್ನು ವಶಕ್ಕೆ ಪಡೆದಿದ್ದ ಸಿಬಿಐ ಪೊಲೀಸರು, ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕುಲದೀಪ್ ಅವರಿಂದಲೇ ಅತ್ಯಾಚಾರ ನಡೆದಿದ್ದು, ಸಹಾಯಕ ಮನೆ ಹೊರಗೆ ಕಾವಲು ಕಾಯುತ್ತಿದ್ದ. ಈ ಸಂಗತಿಗಳನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಜಿಲ್ಲಾಧಿಕಾರಿ ಮುಂದೆ ಹಾಜರುಪಡಿಸಿ, ಹೇಳಿಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಶಾಸಕನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಜೂ.11ರಂದು ಬಾಲಕಿಯನ್ನು ಶುಭಾಂ ಸಿಂಗ್, ಅವಧ್ ನಾರಾಯಣ ಹಾಗೂ ಬ್ರಿಜೇಶ್ ಯಾದವ್ ಅಪಹರಿಸಿದ್ದು, ಜೂ.19ರ ವರೆಗೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವುದು ಸಿಬಿಐ ತನಿಖೆ ವೇಳೆ ಬಯಲಾಗಿತ್ತು.
ಪೊಲೀಸರೂ ಶಾಮೀಲು
ಜೂ.20ರಂದು ಬಾಲಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರೂ, ಶಾಸಕ ಕುಲದೀಪ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿಲ್ಲ. ಸ್ಥಳೀಯ ಪೊಲೀಸರು ನಡೆಸಿದ ತನಿಖೆಯ ಬಳಿಕ ಸಲ್ಲಿಸಿದ ಆರೋಪ ಪಟ್ಟಿಯಲ್ಲೂ ಕುಲದೀಪ್ ಹೆಸರು ಸೇರಿಸಿಲ್ಲ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಾಲಕಿಗೆ ವೈದ್ಯಕೀಯ ತಪಾಸಣೆ ನಡೆಸುವಲ್ಲಿ ಉದ್ಧೇಶಪೂರ್ವಕವಾಗಿ ತಡ ಮಾಡಲಾಗಿದೆ. ಅಂತೆಯೇ ಆಕೆ ತೊಟ್ಟ ಉಡುಗೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಲ್ಲ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.
Comments are closed.