ರಾಷ್ಟ್ರೀಯ

ಬಿಜೆಪಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಗೆಲುವು: ರಾಜ್ಯದ ಜನತೆಗೆ ಧನ್ಯವಾದ ಹೇಳಿದ ಮೋದಿ

Pinterest LinkedIn Tumblr


ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆ 2018 ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದರಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಮೋದಿ ತಮ್ಮ ಟ್ವಿಟ್‌ನಲ್ಲಿ, ಬಿಜೆಪಿ ಅಭಿವೃದ್ಧಿ ಕಾರ್ಯಸೂಚಿಯನ್ನು ಬೆಂಬಲಿಸಿ, ಏಕೈಕ ಅತಿ ದೊಡ್ಡ ಪಕ್ಷವನ್ನಾಗಿ ಮಾಡಿರುವ ರಾಜ್ಯದ ಜನತೆಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

ಏತನ್ಮಧ್ಯೆ ಚುನಾವಣೆಯಲ್ಲಿ ಹಗಲಿರುಳು ದುಡಿದ ರಾಜ್ಯದ ಬಿಜೆಪಿ ಕಾರ್ಯಕರ್ತರಿಗೂ ಪ್ರಧಾನಿ ಮೋದಿ ಸೆಲ್ಯೂಟ್ ಸಲ್ಲಿಸಿದ್ದಾರೆ.

100ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಅತಿ ದೊಡ್ಡವಾಗಿ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಅತ್ತ ಕಾಂಗ್ರೆಸ್ ಬಾಹ್ಯ ಬೆಂಬಲದೊಂದಿಗೆ ಜೆಡಿಎಸ್ ಸರಕಾರ ರಚಿಸಲು ಮುಂದಾಗಿದೆ.

Comments are closed.